ಬೆಳ್ಳಾರೆ :ಕೆ ಪಿ ಎಸ್ ನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿನ 2025-26 ಸಾಲಿನ ಶೈಕ್ಷಣಿಕ ವರ್ಷದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಬ್ಲಿಲ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ 100% ಸಂಸ್ಥೆಗೆ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮವನ್ನು ಶಾಲೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ ದೀಪ ಬೆಳಗಿಸಿ ಉದ್ಘಾಟಿಸಿದರು.
ಶಾಲೆಯ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಹರ್ಷ ಜೋಗಿ ಬೆಟ್ಟು ರವರು ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜನಾರ್ಧನ ಕೆ, ಪ್ರೌಢ ಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಮಾಯಿಲಪ್ಪ ಹಾಗೂ ಶಾಲಾಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳ ಸಾಧನೆಗೆ ಕಾರಣಿಕರ್ತರಾದ ಸಂಸ್ಥೆಯ ಸಿಬ್ಬಂದಿಗಳನ್ನು ಸಹ ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಉಮಾಕುಮಾರಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದರು.
ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿ, ಪುರಂದರ ರವರು ಧನ್ಯವಾದಗೈದರು, ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕಿ ಪುಪ್ಷಾವತಿ ಪಿ ರವರು ನಿರೂಪಿಸಿದರು.