ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ 36 ನೇ ವಾರ್ಷಿಕೋತ್ಸವ

0


ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ೩೬ನೇ ವಾರ್ಷಿಕೋತ್ಸವವು ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹಿರಿಯ ವಕೀಲ


ಕೆ. ಕೃಷ್ಣಮೂರ್ತಿ ಭಾಗವಹಿಸಿ ಕಾನೂನು ವೃತ್ತಿಯ ಮಹತ್ವ, ಅದರಲ್ಲಿರುವ ಅವಕಾಶಗಳು ಹಾಗೂ ಸವಾಲುಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ಕಲಾವತಿ ಎಂ. ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಂಶುಪಾಲೆ ಶ್ರೀಮತಿ ಟೀನಾ ಎಚ್.ಎಸ್. ಅವರು ಮಹಾವಿದ್ಯಾಲಯದ ವಾರ್ಷಿಕ ವರದಿಯನ್ನು ಮಂಡಿಸಿದರು.

ಬಳಿಕ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಕಾರ್ಯದರ್ಶಿ ಕೆ.ವಿ. ಹೇಮನಾಥ ಹಾಗೂ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.

ತದನಂತರ ಅಧ್ಯಕ್ಷೀಯ ಭಾಷಣ ಮಾಡಿದ ಡಾ. ಕೆ.ವಿ. ಚಿದಾನಂದ ಅವರು ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಶ್ರೀಮತಿ ಅರ್ಚನಾ ಆರ್ ರೈ ಅವರು ವಂದನಾರ್ಪಣೆ ಸಲ್ಲಿಸಿದರು. ಬಳಿಕ ಅತಿಥಿಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿಗಳಿಗಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು.
ನಂತರ ವಿದ್ಯಾರ್ಥಿಗಳಿಂದ ಆಯೋಜಿಸಲಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗ, ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.