ಹಿದಾಯ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಯಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ

0

ಬೆಳ್ಳಾರೆ : ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ಇಲಾಖೆ ಹಾಗೂ ಬೆಳ್ಳಾರೆ ಪೋಲಿಸ್ ಠಾಣೆ ವತಿಯಿಂದ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಜೂ. 25ರಂದು ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಶಾಲಾ ಅಧ್ಯಕ್ಷರಾದ ಯು. ಹೆಚ್. ಅಬೂಬಕ್ಕರ್ ವಹಿಸಿದ್ದರು .
ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ಳಾರೆ ಪೋಲಿಸ್ ಠಾಣೆಯ ಉಪನಿರೀಕ್ಷಕರಾದ ಈರಯ್ಯ ಡಿ.ಎನ್ , ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ದುಷ್ಪರಿಣಾಮಗಳು, ಅವುಗಳಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಸಮಾಜದ ಮೇಲೆ ಬೀರುವ ಪ್ರತಿಕೂಲ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಶಿಕ್ಷಕ – ರಕ್ಷಕ ಸಂಘದ ಸದಸ್ಯರಾದ ಇಕ್ಬಾಲ್ ಬಾಳಿಲ ವಿದ್ಯಾರ್ಥಿಗಳಿಗೆ ಹಿತವಚನಗಳನ್ನು ನೀಡಿದರು.
ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಶರೀಫ್ ಭಾರತ್ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಮ್ಮ ಶಾಲಾ ಮುಖ್ಯ ಗುರುಗಳಾದ ಸುನೈನಾ. ಬಿ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಅಝರುದ್ದೀನ್ , ಬೆಳ್ಳಾರೆ ಪೋಲಿಸ್ ಠಾಣೆಯ ಕಾನ್ಸ್‌ಟೇಬಲ್ ಗಂಗಾಧರ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕಿ ಸುನೀತಾ ಸ್ವಾಗತಿಸಿ , ಶಿಕ್ಷಕಿ ಅಶ್ವಿನಿ ವಂದಿಸಿದರು. ಶಿಕ್ಷಕಿ
ಮಿಸ್ರಿಯಾ ನಿರೂಪಿಸಿದರು.