ಹರಿಹರ ಪಲ್ಲತ್ತಡ್ಕ : ಧ.ಗ್ರಾ.ಯೋ. ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು ಮತ್ತು ಕೊತ್ನಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಜೂ.26 ರಂದು ನಡೆಯಿತು. ಹರಿಹರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ ಪಡ್ಪು ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ವೆಂಕಪ್ಪ ಗೌಡ ಅವರು ದೀಪವನ್ನು ಪ್ರಜ್ವಲಿಸಿ ಶುಭಹಾರೈಸಿದರು. ಸಮಾರಂಭದಲ್ಲಿ ಜವಾಬ್ದಾರಿ ಹಸ್ತಾಂತರವನ್ನು ಮಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕಿನ ಯೋಜನಾಧಿಕಾರಿಯವರಾದ ಮಾಧವ ಗೌಡರವರು ಸಭೆಯನ್ನು‌ ಉದ್ದೃಶಿಸಿ ಮಾತನಾಡಿದರು.


ಸಮಾರಂಭದ ಮುಖ್ಯ ಅತಿಥಿಗಳಾದ ಗುತ್ತಿಗಾರಿನ ಶ್ರೀ ಮುತ್ತಪ್ಪ ತಿರುವಪ್ಪನ್ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಸುಬ್ರಹ್ಮಣ್ಯ ವಲಯ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಸತೀಶ್ ಟಿ ಎನ್ , ಬಾಳುಗೋಡು ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಉಷಾ ಪ್ರಭಾಕರ ಕಿರಿಭಾಗ, ಸುಬ್ರಹ್ಮಣ್ಯ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ವಲಯ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಉಪಸ್ಥಿತರಿದ್ದು ಶುಭಕೋರಿದರು.
ಈ ಸಮಾರಂಭದಲ್ಲಿ ಸುಬ್ರಹ್ಮಣ್ಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರನ್ನು, ನವಜೀವನ ಸಮಿತಿಯ ಸದಸ್ಯರನ್ನು, ವಲಯ ಭಜನಾ ಪರಿಷತ್ ನ ಪದಾಧಿಕಾರಿಗಳನ್ನು, ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು, ಕೊತ್ನಡ್ಕ ಒಕ್ಕೂಟಗಳ ನಿಕಟ ಪೂರ್ವ ಪದಾಧಿಕಾರಿಗಳನ್ನು ಮತ್ತು ನಿಕಟ ಪೂರ್ವ ಉಪಸಮಿತಿ ಹಾಗೂ ದಾಖಲಾತಿ ಸಮಿತಿಯ ಸದಸ್ಯರನ್ನು ಗುರುತಿಸಲಾಯಿತು. 2025-26ನೇ ಸಾಲಿನ ಒಲಿoಪ್ಯಾಡ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಒಲಿoಪ್ಯಾಡ್ ಪ್ರಮಾಣ ಪತ್ರವನ್ನು ವಿತರಣೆ ಮಾಡಲಾಯಿತು. ಭಜನಾ ಪರಿಷತ್ ನ ವಲಯ ಅಧ್ಯಕ್ಷರಾದ ಚಂದ್ರಶೇಖರ ಕೊಂದಳರವರು, ಸೇವಾಪ್ರತಿನಿಧಿಗಳಾದ ನಾಗವೇಣಿ ಮತ್ತು ರೇಖಾರವರು, ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು, ಕೊತ್ನಡ್ಕ ಒಕ್ಕೂಟಗಳ ನಿಕಟ ಪೂರ್ವ ಮತ್ತು ನೂತನ ಅಧ್ಯಕ್ಷರುಗಳು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಹರಿಹರ ಪಲ್ಲತ್ತಡ್ಕ, ಐನೆಕಿದು, ಬಾಳುಗೋಡು, ಕೊತ್ನಡ್ಕ ಒಕ್ಕೂಟಗಳ ನಿಕಟ ಪೂರ್ವ ಮತ್ತು ನೂತನ ಪದಾಧಿಕಾರಿಗಳು, ಎಲ್ಲಾ ಒಕ್ಕೂಟಗಳ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಜನ ಜಾಗೃತಿ ವೇದಿಕೆಯ ಪದಾಧಿಕಾರಿಗಳು, ಭಜನಾ ಪರಿಷತ್ ನ ಪದಾಧಿಕಾರಿಗಳು, ನವಜೀವನ ಸಮಿತಿಯ ಸದಸ್ಯರುಗಳು ಭಾಗವಹಿಸಿದರು.


ಈ ಸಮಾರಂಭದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು ವರದಿ ವಾಚನ ಮಾಡಿದರು.‌ ಹರಿಹರ ಪಲ್ಲತ್ತಡ್ಕ ಒಕ್ಕೂಟದ ನೂತನ ಅಧ್ಯಕ್ಷರಾದ ಗಿರೀಶ್ ಎಂ ಟಿ ಸ್ವಾಗತಿಸಿದರು. ಬಾಳುಗೋಡು ಒಕ್ಕೂಟದ ನೂತನ ಅಧ್ಯಕ್ಷರಾದ ನಿತಿನ್ ಕುಮಾರ್ ರವರು ಕಾರ್ಯನಿರೂಪಿಸಿದರು. ಹರಿಹರ ಪಲ್ಲತ್ತಡ್ಕ ಒಕ್ಕೂಟದ ನೂತನ ಕಾರ್ಯದರ್ಶಿಯವರಾದ ಶ್ರೀಮತಿ ಪುಷ್ಪಾವತಿರವರು ಧನ್ಯವಾದವಿತ್ತರು.