ಎಂ.ಮೀನಾಕ್ಷಿ ಗೌಡರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ
ಮೀನಾಕ್ಷಿ ಗೌಡರು ಮಾದರಿ ಮಹಿಳೆ : ಶಾಸಕಿ ಭಾಗೀರಥಿ ಮುರುಳ್ಯ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ, ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇವರ ಸಹಕಾರದೊಂದಿಗೆ ಗೌಡರ ಯುವ ಸೇವಾ ಸಂಘ ಸುಳ್ಯ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು, ಅರಂತೋಡು ಗ್ರಾಮ ಗೌಡ ಸಮಿತಿ ಹಾಗೂ ಮಹಿಳಾ ಸಮಿತಿಗಳ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ 517 ನೇ ಜನ್ಮದಿನಾಚರಣೆ ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.















ಸಮಾರಂಭದ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. “ಮೀನಾಕ್ಷಿ ಗೌಡರು ಅಧಿಕಾರಿಯಾಗಿದ್ದ ಸಂದರ್ಭ ಭ್ರಷ್ಟಾಚಾರ ರಹಿತವಾಗಿ ಆಡಳಿತ ನೀಡಿದವರು. ಅವರು ಸಮಾಜಮುಖಿಯಾಗಿ ತೊಡಗಿಸಿಕೊಂಡವರು. ಅವರ ಜೀವನ ಮಾದರಿಯಾಗಿದ್ದು ಅರ್ಹವಾಗಿಯೇ ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ” ಎಂದು ಹೇಳಿದರು.
ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಶ್ರೀಮತಿ ಎಂ.ಮೀನಾಕ್ಷಿ ಗೌಡರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯ ಕಾರ್ಮಿಕರ ಕನಿಷ್ಡ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಕಾರ್ಯಕ್ರಮ ಉದ್ಘಾಟಿಸಿದರು.

ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ದ.ಕ. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ, ಗ್ಯಾರಂಟಿ ಯೋಜನಾ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಅರಂತೋಡು – ತೊಡಿಕಾನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಂಚಾಲಕ ಎ.ಸಿ.ವಸಂತ ಮುಖ್ಯ ಅತಿಥಿಗಳಾಗಿದ್ದರು.
ನಿವೃತ್ತ ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ಚಂದ್ರಮತಿ ಕೆ. ಉಪನ್ಯಾಸ ನೀಡಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ, ತಹಶೀಲ್ದಾರ್ ಶ್ರೀಮತಿ ಮಂಜುಳಾ ಎಂ., ಗೌಡರ ಯುವ ಸೇವಾ ಸಂಘದ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್., ಮುಖ್ಯೋಪಾಧ್ಯಾಯ ಸೋಮಶೇಖರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ಸ್ವಾಗತಿಸಿದರು. ದಿನೇಶ್ ಮಡಪ್ಪಾಡಿ ಮೀನಾಕ್ಷಿ ಗೌಡರ ಪರಿಚಯ ಮಾಡಿದರು. ಶಿಕ್ಷಕ ಕಿಶೋರ್ ಕುಮಾರ್ ಕಿರ್ಲಾಯ ಕಾರ್ಯಕ್ರಮ ನಿರೂಪಿಸಿದರು.







