ಕೆವಿಜಿ ಅಮರ ಜ್ಯೋತಿ ಪಿ.ಯು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಸ್ವಾಸ್ಥ್ಯ ಸಂಕಲ್ಪ ಆನ್ಲೈನ್ ಕಾರ್ಯಕ್ರಮ

0

ಸುಳ್ಯದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜನಜಾಗೃತಿ ವೇದಿಕೆ ಸುಳ್ಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯದ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಸ್ವಾಸ್ಥ್ಯ ಸಂಕಲ್ಪ ಅನ್ಲೈನ್ ಕಾರ್ಯಕ್ರಮವನ್ನು ಜೂ. 30ರಂದು ಆಯೋಜಿಸಲಾಯಿತು. ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಇದರ ಯೋಜನಾಧಿಕಾರಿ ಮಾದವ ಗೌಡ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿ, ಮಾದಕವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೆಂಕಪ್ಪ ಗೌಡರು ಯುವಜನತೆ ಮಾದಕವಸ್ತುಗಳ ಚಟದಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋಧಾ ರಾಮಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಹಾಗೂ ಮಾದಕವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದರು. ಈ ಸಂದರ್ಭದಲ್ಲಿ ಸುರೇಶ್ ಕಣೆಮರಡ್ಕ, ಲೋಕನಾಥ ಅಮೆಚೂರು, ವಿಜಯಕುಮಾರ್ ಉಬರಡ್ಕ, ಬೂಡು ರಾಧಾಕೃಷ್ಣ, ಜಿನ್ನಪ್ಪ ಪೂಜಾರಿ, ದಿನೇಶ್, ಸೌಜನ್ಯ ವೇದಿಕೆಯಲ್ಲಿದ್ದರು. ನಂತರ ನಡೆದ ಆನ್‌ಲೈನ್ ಅಧಿವೇಶನದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಎಚ್.ಎನ್. ವೆಂಕಟೇಶ್ವರ ಪ್ರಸನ್ನ, ಖ್ಯಾತ ಹೃದ್ರೋಗ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ, ಕನ್ನಡ ಚಲನಚಿತ್ರ ನಟ ರಾಘವೇಂದ್ರ ರಾಜ್ ಕುಮಾರ್ ಭಾಗವಹಿಸಿ, ಮಾದಕವಸ್ತು ಸೇವನೆಯ ಅಪಾಯಗಳು, ಕಾನೂನು ಕ್ರಮಗಳು ಮತ್ತು ಯುವಜನರ ಜವಾಬ್ದಾರಿಗಳ ಕುರಿತು ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಮಲ್ಲಿಕಾ ಎಂ.ಎಲ್. ನಿರ್ವಹಿಸಿದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿನಿ ಸೊಹನಿಯ ಪ್ರಾರ್ಥಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಸ್ವಾಗತಿಸಿದರು.