ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಎಸ್ ಎಸ್ ಎಲ್ ಸಿ ಸಾಧಕರಿಗೆ ಅಭಿನಂದನಾ ಸಮಾರಂಭ

0

ಫಲಕ ಮತ್ತು ಪ್ರೋತ್ಸಾಹ ಧನ ನೀಡಿ ಗೌರವ ಸನ್ಮಾನ ಮಾಡಿದ ಗಣ್ಯರುಗಳು

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025 – 26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರಾಂಕ್ ಪಡೆದ ವಿದ್ಯಾರ್ಥಿನಿ ಮತ್ತು ಡಿಸ್ಟಿಂಕ್ಷನ್ ಪಡೆದ 39 ವಿದ್ಯಾರ್ಥಿಗಳಿಗೆ ಸಾಧನಾ ಅಭಿನಂದನಾ ಸಮಾರಂಭ ಜು 4 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾದ ಶ್ರೀಮತಿ ಮಂಜುಳಾ ಬಡಿಗೇರ್ ರವರು ವಹಿಸಿದ್ದರು.
ಸಾಧಕ ಎಲ್ಲಾ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರುಗಳು ಶಾಲುಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿ ದಾನಿಗಳ ಸಹಕಾರದಿಂದ ನೀಡಲ್ಪಟ್ಟ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.

ಪ್ರೋತ್ಸಾಹ ಧನ ದಾನಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಲೋಕಯ್ಯಗೌಡ, ಡಾ. ವೀಣಾ, ಉದ್ಯಮಿ ಅಶೋಕ್ ಪ್ರಭು, ಹಾಗೂ ತಿಮ್ಮಪ್ಪ ಗೌಡ ಮದುವೆ ಗದ್ದೆ ಇವರುಗಳು ಸಹಕರಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕ ಲೋಕಯ್ಯ ಮಾಸ್ಟರ್ ಅತ್ಯಾಡಿ ,ಹಾಗೂ ವೈದ್ಯರಾದ ಶ್ರೀಮತಿ ವೀಣಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ್ ರೈ, ಲಯನ್ಸ್ ಅಧ್ಯಕ್ಷರು ಮತ್ತು ಕಾರ್ಯದರ್ಶಿ, ಶಾಲಾ ನಿವೃತ್ತ ದೈಹಿಕ ಶಿಕ್ಷಕ ಇಸುಬು ಮಾಸ್ಟರ್, ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ಚಂದ್ರಮತಿ, ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಹಸೈನಾರ್ ಜಯನಗರ, ಹಾಗೂ ಎ ಡಿ ಎಂ ಸಿ ಸದಸ್ಯರುಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿ ಗಣ್ಯರುಗಳು ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ ಶುಭ ಹಾರೈಸಿದರು.

ಪ್ರಕಾಶ್ ಮೂಡಿತ್ತಾಯ ರವರು ಸ್ವಾಗತಿಸಿ ವಿಜ್ಞಾನ ಶಿಕ್ಷಕರಾದ ಚಂದ್ರಶೇಖರ್ ವಂದಿಸಿ ಹಿರಿಯ ಶಿಕ್ಷಕಿ ಪೂರ್ಣಿಮಾ ರವರು ಕಾರ್ಯಕ್ರಮ ನಿರೂಪಿಸಿದರು.