ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಭಾರ ಸಿ.ಇ.ಒ ಆಗಿ ಶಕುಂತಳ ಕೃಷ್ಣನ್ ಅಧಿಕಾರ ಸ್ವೀಕಾರ

0

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ದಿನಕರ ಎ ರವರು ಜೂ.30 ರಂದು ವೃತ್ತಿ ಸೇವೆಯಿಂದ ನಿವೃತ್ತಿ ಹೊಂದಿದ್ದು, ಸಂಘದ ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಶ್ರೀಮತಿ ಶಕುಂತಳ ಕೃಷ್ಣನ್ ರವರನ್ನು ಆಡಳಿತ ಮಂಡಳಿಯ ಸಭೆಯ ನಿರ್ಣಯದಂತೆ ನೇಮಕ ಮಾಡಲಾಗಿದೆ.

ಸಹಕಾರಿ ಸಂಘದಲ್ಲಿ ಹಿರಿಯ ವ್ಯವಸ್ಥಾಪಕಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಕುಂತಳ ಕೃಷ್ಣನ್ ರವರು ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದು,
ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕುಂಚಡ್ಕ ರವರ ಸಮ್ಮುಖದಲ್ಲಿ ಜು.1 ರಂದು ಅಧಿಕಾರ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ಮತ್ತು ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.