ಸುಳ್ಯ ಶ್ರೀ ಶಾರದ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್.ರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ

0
  ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಸನ್ನ ಎನ್.ಹೆಚ್ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು 04 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯಾದ ದ.ಕ ಗೌಡ ವಿದ್ಯಾ ಸಂಘ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಶಾರದಾ ಪ್ರೌಢಶಾಲೆಯ ವತಿಯಿಂದ ಈ ಸಮಾರಂಭವನ್ನು ಆಯೋಜಿಸಲಾಯಿತು .



. ದ.ಕ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ್ ಅಡ್ಪಂಗಾಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೆ ಸಿ ಸದಾನಂದ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಅಧ್ಯಕ್ಷರಾದ ಧನಂಜಯ ಅಢ್ಪಂಗಾಯ ,ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಮತ್ತು ಅತಿಥಿ ಗಣ್ಯರು ಪ್ರಸನ್ನ ಎನ್.ಹೆಚ್ ಹಾಗೂ ಅವರ ಪತ್ನಿ ರವಿಶ್ರೀ ಅವರನ್ನು ಸನ್ಮಾನಿಸಿದರು. ಗೌಡ ವಿದ್ಯಾಸಂಘದ ನಿರ್ದೇಶಕರಾದ ಜಯರಾಮ್ ಚಿಲ್ತಡ್ಕ, ಡಾ.ಸಾಯಿ ಗೀತಾ, ಉಮೇಶ್ ಮಳವೇಲು,ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶ್ರೀ ಶಾರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸ್ವರ್ಣಕಲಾ ಎ.ಎಸ್, ಪ್ರಾಸ್ತಾವಿಕ ನುಡಿಗಳೊಂದಿಗೆ ಸರ್ವರನ್ನು ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲೆ ಶ್ರೀಮತಿ ದಯಾಮಣಿ ಅಭಿನಂದನಾ ಭಾಷಣವನ್ನು ಮಾಡಿದರು.,
ಆಂಗ್ಲ ಭಾಷಾ ಉಪನ್ಯಾಸಕಿ ಸ್ವಾತಿ ಅಭಿನಂದನಾ ಪತ್ರ ವಾಚಿಸಿದರು.
ಅತಿಥಿಗಳು, ಬಂಧು ಮಿತ್ರರು, ಕಾಲೇಜಿನ ಉಪನ್ಯಾಸಕರುಗಳು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಶುಭ ಹಾರೈಸಿದರು. ಕನ್ನಡ ಉಪನ್ಯಾಸಕರಾದ ಶ್ರೀಮತಿ ಗಾಯತ್ರಿ ಅವರು ವಂದಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.