













ಸುಬ್ರಹ್ಮಣ್ಯದ ಎಸ್.ಎಸ್.ಪಿ ಯು ಕಾಲೇಜಿನಲ್ಲಿ ಜು.10 ವಿದ್ಯಾರ್ಥಿ ಸರಕಾರವನ್ನು ಕಲಾವಿದ, ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಯಜ್ಞೇಶ್ ಆಚಾರ್ ಉದ್ಘಾಟಿಸಿದರು.
ವಿದ್ಯಾರ್ಥಿ ನಾಯಕ ಬಿಪಿನ್ ಐ.ಕೆ, ಉಪಾಧ್ಯಕ್ಷೆ ಚಿಂತನಾ.ಕೆ, ಕಾರ್ಯದರ್ಶಿ ಆಕಾಶ್ ಪ್ರಕಾಶ್, ಸಾಂಸ್ಕೃತಿಕ ನಿರ್ದೇಶಕಿ ಮೋನಿಷಾ ರೈ, ಕ್ರೀಡಾ ಕಾರ್ಯದರ್ಶಿ ಮನ್ವಿತ್ ಎ.ಜೆ ಸೇರಿದಂತೆ ಇತರ ಪದಾಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ವಹಿಸಿದ್ದರು.ಕೆ.ಎಸ್.ಎಸ್ ಕಾಲೇಜಿನ ಉಪನ್ಯಾಸಕ ಉದಯ ಕುಮಾರ್, ಮಾಜಿ ಗ್ರಾ.ಪಂ ಸದಸ್ಯೆ ಭಾರತಿ ದಿನೇಶ್ ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್. ಆರ್, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್,ವಿದ್ಯಾರ್ಥಿ ಪ್ರತಿನಿಧಿಗಳು, ತರಗತಿ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.







