













ಹಾವೇರಿ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ
ಡಾ. ಗೀತಾ ಗುಡ್ಡೆಮನೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ .
ಈ ನೇಮಕಾತಿಯು ಮೂರು ವರ್ಷಗಳ ಅವಧಿಯನ್ನು ಹೊಂದಿದೆ .
ಡಾ. ಗೀತಾ ಗುಡ್ಡೆಮನೆ ಅವರು ಕ್ರೀಡೆ , ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು,
ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯಾಗಿ , ಪ್ರಸ್ತುತ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್ ನ ಉಪಾಧ್ಯಕ್ಷರಾಗಿ, ಹಾಗೂ ರಾಷ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ವೇದಿಕೆ ಉಪಾದ್ಯಕ್ಷರಾಗಿ ಅಲ್ಲದೆ ಕರ್ನಾಟಕ ದೈಹಿಕ ಶಿಕ್ಷಣ ಕ್ರೀಡಾ ಸಂಘ ರಾಜ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ • ಈ ಹಿಂದೆ ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದ್ಯಸರಾಗಿ ಕಾರ್ಯನಿರ್ವಹಿದ್ದರು.







