ವಿದ್ಯಾಮಾತಾ ಸುಳ್ಯದಲ್ಲಿ ನವೋದಯ, ಸೈನಿಕ, ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭ

ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಯುವ ಜನತೆಗೆ ಅವರ ಬದುಕನ್ನು ಕಟ್ಟಿಕೊಳ್ಳಲು ನಿರಂತರವಾಗಿ ಮಾರ್ಗದರ್ಶನ ಮಾಡುತ್ತಾ ಹಲವಾರು ಸರಕಾರಿ ನೇಮಕಾತಿಗಳಲ್ಲಿ ನೇಮಕಗೋಳ್ಳುವಂತೆ ಮಾಡಿದ ಕೀರ್ತಿಯನ್ನು ಹೊತ್ತು ಮುನ್ನಡೆಯುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ಪೂರ್ವ ಸಿದ್ದತಾ ತರಬೇತಿಗಳು ಪ್ರಾರಂಭಗೊಂಡವು.














ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಇಲ್ಲಿಯ ಶಿಕ್ಷಣ ಸಂಯೋಜಕರಾದ ಉದಯ ಕುಮಾರ್ ರವರು ಮಾತನಾಡಿ “ವಿದ್ಯಾಮಾತಾ ಅಕಾಡೆಮಿಯು ಚಿಕ್ಕ ವಯಸ್ಸಿನ ಮಕ್ಕಳ ಭವಿಷ್ಯಕ್ಕೆ ಪೂರಕವಾದ ತರಬೇತಿ ನೀಡಿ ಉತ್ತಮ ರೀತಿಯಲ್ಲಿ ಮಾರ್ಗದರ್ಶನ ನೀಡಿ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಕಾರ್ಯ ಪ್ರಶಂಸನೀಯ ಅಲ್ಲದೇ ಗ್ರಾಮೀಣ ಭಾಗದ ವಿದ್ಯಾಮಾತಾ ಅಕಾಡೆಮಿಯ ಇಂತಹ ಕಾರ್ಯಗಳಿಗೆ ನಾವೆಲ್ಲರೂ ಕೈ ಜೋಡಿಸಬೇಕು ಎಂದು” ಎಂದು ಕರೆ ನೀಡಿ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು “ಕೇವಲ ಅಂಕಗಳಿಗೆ ಸೀಮಿತವಾದ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಕೌಶಲ್ಯಯುತವಾದ ಮೌಲ್ಯಯುತ ಶಿಕ್ಷಣವು ಅಗತ್ಯವಿದ್ದು ಇದಕ್ಕೆ ಪೂರಕವಾದ ವ್ಯವಸ್ಥೆಯನ್ನು ವಿದ್ಯಾಮಾತಾ ಅಕಾಡೆಮಿಯು ಒದಗಿಸಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಫಲಿತಾಂಶ ಬರುತ್ತಿರುವುದು ಆಶಾದಾಯಕವಾಗಿದೆ ಇದು ನಮ್ಮ ಭವಿಷ್ಯದ ತರಬೇತಿಗಳಿಗೆ ಉತ್ತೇಜನ ನೀಡುತ್ತದೆ ” ಎಂದು ನುಡಿದರು.
ಈ ರೀತಿ ನಡೆಯಲಿದೆ ತರಬೇತಿ…
ನುರಿತ ತರಬೇತುದಾರರಿಂದ ತರಬೇತಿಯು ಪ್ರತೀ ಆದಿತ್ಯವಾರ ಬೆಳಿಗ್ಗೆ 10ರಿಂದ ಸಂಜೆ 3 ರ ವರೆಗೆ ನಡೆಯುತ್ತದೆ, ಸೀಮಿತ ವಿದ್ಯಾರ್ಥಿಗಳಿಗೆ ಅವಕಾಶವಿರುವ ಈ ತರಬೇತಿಯಲ್ಲಿ ವಿದ್ಯಾರ್ಥಿಗಳ ಮೇಲೆ ವೈಯಕ್ತಿಕ ಗಮನ ವಹಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಗಮನವಹಿಸಿ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ಸಜ್ಜುಗೊಳಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು,ಸಂಸ್ಥೆಯ ತರಬೇತುದಾರರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನವೋದಯ, ಸೈನಿಕ ಹಾಗೂ ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳ ತರಬೇತಿ ಪಡೆಯಲಿಚ್ಛಿಸುವವರು ಕಛೇರಿ ಸಂಖ್ಯೆ 9148935808/ 96204 68869ನ್ನು ಸಂಪರ್ಕಿಸಿ ದಾಖಲಾತಿಯನ್ನು ಪಡೆದುಕೊಳ್ಳಬಹುದು.







