ಮಾಜಿ ಸಚಿವ ಎಚ್.ಡಿ. ರೇವಣ್ಣ ಸುಬ್ರಹ್ಮಣ್ಯಕ್ಕೆ ಭೇಟಿ-ಜೆಡಿಎಸ್ ಮುಖಂಡರು‌‌ ಉಪಸ್ಥಿತಿ

0

ಮಾಜಿ ಸಚಿವರಾದ ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಜು.13ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.


ಜನತಾದಳ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಪ್ರಿಯಾ ಸಾಲಿಯಾನ್ ಪುತ್ತೂರು‌ ಮತ್ತು ಸಾಮಾಜಿಕ ಮುಖಂಡ ಜಾಕೆ ಸಂತೋಷ್ ಉಪಸ್ಥಿತರಿದ್ದರು.
ಬಳಿಕ ರೇವಣ್ಣ ಅವರು ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.