ಸುಳ್ಯದ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಅಧಿಕಾರ ಸ್ವೀಕಾರ ಸಮಾರಂಭ ಮತ್ತು ಎಸ್ ಎಸ್ ಎಲ್ ಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

0


ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಜು. ೧೧ರಂದು ವಿದ್ಯಾರ್ಥಿ ಸರಕಾರದ ಅಧಿಕಾರ ಸ್ವೀಕಾರ ಸಮಾರಂಭ ಮತ್ತು ಎಸ್. ಎಸ್. ಎಲ್.ಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಡಂಗಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಸುಬ್ರಹ್ಮಣೇಶ್ವರ ಪದವಿಪೂರ್ವ ಕಾಲೇಜು ಇಲ್ಲಿನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ಯಶವಂತ ರೈ ಮರ್ದಾಳ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಪ್ರಭಾವತಿ ಎಸ್ ಇವರು ೨೦೨೬-೨೭ ನೇ ಸಾಲಿನ ವಿದ್ಯಾರ್ಥಿ ಸರಕಾರದ ವಿವಿಧ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
೨೦೨೫-೨೬ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿದ್ದ ಗಣ್ಯರು ಶಾಲು ಹೊದಿಸಿ ಸ್ಮರಣಿಕೆಗಳನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶ್ರೀ ಶಾರದಾ ಪ್ರೌಢಶಾಲೆಯ ನಿವೃತ್ತ ಡಿ. ದರ್ಜೆ ಸಹಾಯಕರಾದ ಶ್ರೀಮತಿ ಹೇಮಪ್ರಭ ಇವರನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ವತಿಯಿಂದ ಅಧ್ಯಕ್ಷರಾದ ಧನಂಜಯ ಅಡ್ಡಂಗಾಯ ಸನ್ಮಾನಿಸಿದರು. ಮುಖ್ಯ ಅತಿಥಿಗಳಾದ ಕೆ .ಯಶವಂತ ರೈ ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ಶಾರದಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ ಎಲ್ಲರನ್ನು ಸ್ವಾಗತಿಸಿ ಎಸ್ .ಎಸ್ .ಎಲ್ .ಸಿ ಸಾಧಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸ್ವರ್ಣಕಲಾ ಎ ಎಸ್, ಶಿಕ್ಷಕ ವೃಂದದವರು, ವಿದ್ಯಾರ್ಥಿ ಸಂಘದ ವಿವಿಧ ಪದಾಧಿಕಾರಿಗಳು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕನ್ನಡ ಭಾಷಾ ಶಿಕ್ಷಕರಾದ ಶ್ರೀಮತಿ ಭವ್ಯ ಪಿ. ಕಾರ್ಯಕ್ರಮ ನಿರೂಪಿಸಿದರು. ಹಿಂದಿ ಭಾಷಾ ಶಿಕ್ಷಕರಾದ ಶ್ರೀಮತಿ ಸೌಮ್ಯ ವಂದಿಸಿದರು.