ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲು














ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರೊಬ್ಬರಿಗೆ ಕೂಡೊಲು ಕಚ್ಚಿ ಗಂಭೀರ ಗಾಯಗೊಂಡು ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತಂದು ದಾಖಲಿಸಿರುವ ಘಟನೆ ಜುಲೈ 15ರಂದು ನಡೆದಿದೆ.
ಗಾಯಗೊಂಡು ಆಸ್ಪತ್ರೆಗೆ ಸೇರಿದ ವ್ಯಕ್ತಿ ತೊಡಿಕಾನ ದೊಡ್ಡಕುಮೇರಿ ನಿವಾಸಿ ಕೇಪು ಎಂಬುವರಾಗಿದ್ದು ಅವರು ಇಂದು ಮಧ್ಯಾಹ್ನ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.







