ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನಿಹಾಲ್ ಕೆ.ಎ. ಪ್ರಥಮ

0

ವಿಜಯ ಕರ್ನಾಟಕ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಯಾದ ನಿಹಾಲ್ ಕೆ. ಎ. ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಸುಳ್ಯ ತಾಲೂಕಿನಿಂದ ಒಬ್ಬ ವಿದ್ಯಾರ್ಥಿ ಮಾತ್ರ ವಿಜೇತರಾಗಿರುತ್ತಾರೆ ಎಂದು ಶಾಲಾ ಪ್ರಾಂಶುಪಾಲರು ತಿಳಿಸಿರುತ್ತಾರೆ. ಇವರು ಪೆರಾಜೆ ಗ್ರಾಮದ ಕುಂಬಳಚೇರಿ ಮನೆ ಅನಿಲ್ ಕೆ. ಎಂ. ಮತ್ತು ಶ್ರೀಮತಿ ಲತಿಕಾ ಪಿ.ಎಂ. ದಂಪತಿಗಳ ಪುತ್ರ.