ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಬಿಳಿಯಾರಿನ ಯುವಕ ಆಸ್ಪತ್ರೆಯಲ್ಲಿ ಮೃತ್ಯು














ಬಿಳಿಯಾರು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜು 22 ರಂದು ರಾತ್ರಿ ನಡೆದಿದೆ.
ಮೃತ ಯುವಕ ಬಿಳಿಯಾರು ನಿವಾಸಿ ಸುಬ್ರಾಯ ನಾಯ್ಕ್ ರವರ ಪುತ್ರ ಸಂತೋಷ್ ಎಂದು ತಿಳಿದುಬಂದಿದೆ.
ಬಿಳಿಯಾರಿನಿಂದ ಸುಳ್ಯದತ್ತ ಬರುತ್ತಿದ್ದ ಬೈಕ್ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಗಾಯಾಳುವನ್ನು ಅರಂತೋಡಿನ ಸಮೃದ್ಧಿ ಆಂಬುಲೆನ್ಸ್ ಮೂಲಕ ಚಾಲಕ ಶರತ್ ರವರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.







