ಪಂಜ ಕೆ.ಪಿ.ಎಸ್. ಪ್ರಾಥಮಿಕ ಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಸಿಸಿಟಿವಿ ಕೊಡುಗೆ

0

ಕರ್ನಾಟಕ ಪಬ್ಲಿಕ್ ಸ್ಕೂಲ್ ಪಂಜ ಪ್ರಾಥಮಿಕ ಶಾಲೆಗೆ ಹಿರಿಯ ವಿದ್ಯಾರ್ಥಿಗಳು ಸೇರಿ ಸುಮಾರು 46500/ ರೂಪಾಯಿ ವೆಚ್ಚದ ನಾಲ್ಕು ಸಿಸಿಟಿವಿಗಳಗಳನ್ನು ಅಳವಡಿಸಿ ಕೊಡುಗೆಯಾಗಿ ನೀಡಿದ್ದಾರೆ.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುರುಷೋತ್ತಮ ನೆಕ್ಕಿಲ ರವರು ಚೆಕ್ಕನ್ನು ಶಾಲಾ ಮುಖ್ಯ ಶಿಕ್ಷಕಿ ಲೀಲಕುಮಾರಿ.ಟಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಹಾಗೂ ಮೇಲೂಸ್ತುವಾರಿ ಸಮಿತಿ ಅಧ್ಯಕ್ಷ ಲಿಗೋದರ ಆಚಾರ್ಯ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದಾಮೋದರ ನೇರಳ, ಸದಸ್ಯ ನಿರ್ಮಲ ಪಲ್ಲೋಡಿ ಹಾಜರಿದ್ದರು.