ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಘಟಕ ಉದ್ಘಾಟನೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆ‌,4 ರಂದು ಸ್ಪರ್ಧಾತ್ಮಕ ಪರೀಕ್ಷಾ ಘಟಕವನ್ನು ಪರಿಚಯಿಸಿ ಉದ್ಘಾಟಿಸಲಾಯಿತು.

ಪುತ್ತೂರಿನ ವಿದ್ಯಾಮಾತಾ ಸಂಸ್ಥೆಗಳ ಸಂಸ್ಥಾಪಕರಾದ ಭಾಗ್ಯೇಶ್ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ ಹಾಗೂ ತಮ್ಮ ಸಂಸ್ಥೆಯಲ್ಲಿ ನೀಡಲಾಗುವ ತರಬೇತಿಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಅವರು ವಹಿಸಿದ್ದರು.
ಸ್ಪರ್ಧಾತ್ಮಕ ಪರೀಕ್ಷಾ ಘಟಕದ ಸಂಚಾಲಕಿಯರಾದ ಶ್ರೀಮತಿ ಆರತಿ ಕೆ. ಸ್ವಾಗತಿಸಿದರು. ಸಂಚಾಲಕಿಯರಾದ ಶ್ರೀಮತಿ ಸ್ವಾತಿ ಕೆ. ವಂದಿಸಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಕು. ಅನನ್ಯ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧಾತ್ಮಕ ಪರೀಕ್ಷಾ ಘಟಕದ ವಿದ್ಯಾರ್ಥಿ ಪ್ರತಿನಿಧಿ,ಕು. ರಮ್ಯಾ ಉಪಸ್ಥಿತರಿದ್ದರು.