ಜಯನಗರ ಮಸೀದಿಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಜಯನಗರ ಜನ್ನತುಲ್ ಉಲೂಮ್ ಮಸೀದಿ ಮತ್ತು ಮದ್ರಸಾ ಕಮಿಟಿ ವತಿಯಿಂದ ಅಗಸ್ಟ್ 15 ರಂದು 80 ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಸಮಿತಿಯ ಅಧ್ಯಕ್ಷರಾದ ನವಾಜ್ ಪಂಡಿತ್ ನೆರವೇರಿಸಿದರು.

i

ಸ್ವಾತಂತ್ರ್ಯ ದಿನದ ಸಂದೇಶ ನೀಡಿ ಮಾತನಾಡಿದ ಮದರಸದ ಸದರ್ ಮುಅಲ್ಲಿಮ್ ಶಫೀಕ್ ನಈಮಿ ಉಸ್ತಾದರು ‘ನಮ್ಮ ಹಿರಿಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಹೋರಾಟಗಾರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ. ಸಮಾಜದಲ್ಲಿ ನಾವೆಲ್ಲರೂ ಉತ್ತಮ ಪ್ರಜೆಗಳಾಗಿ ಬಾಳುವ ಮೂಲಕ ದೇಶದ ಸ್ವಾತಂತ್ರವನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಸಂದೇಶ ನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ ಎಚ್ ಶಮೀರ್ ಜಯನಗರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮದರಸ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಗೂ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.