ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ

0

ದ ಕ ಗೌಡ ವಿದ್ಯಾ ಸಂಘದ ವತಿಯಿಂದ ನಡೆಯುತ್ತಿರುವ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ೮೦ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಢ್ಪಂಗಾಯರವರು ಧ್ವಜಾರೋಹಣಗೈದು ಸರ್ವರನ್ನು ಉದ್ದೇಶಿಸಿ ಭಾರತದ ಶ್ರೇಷ್ಠತೆ ಮತ್ತು ಅಭಿವೃದ್ಧಿಯ ಬಗ್ಗೆ ಮಾತನಾಡಿದರು.


ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸ್ವರ್ಣಕಲ ಎ.ಎಸ್. ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭಾರತಿ ಪಿ ಇವರು ವಂದಿಸಿದರು. ದೈಹಿಕ ಉಪನ್ಯಾಸಕರಾದ ಅಕ್ಷತ್ ಪಿ. ಹಾಗೂ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪ್ರಭಾವತಿ ಕಾರ್ಯಕ್ರಮವನ್ನು ಸಂಘಟಿಸಿದ್ದರು.