













ಸುಳ್ಯ ಕೇರ್ಪಳ ಶಾಲೆಯಲ್ಲಿ ನಡೆದ 80 ನೇ ವರ್ಷದ ಧ್ವಜಾರೋಹಣ ವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಮತಿ ನೆರವೇರಿಸಿದರು.
ಪಯಸ್ವಿನಿ ಯುವಕ ಮಂಡಲ ಅಧ್ಯಕ್ಷ ಲಕ್ಷ್ಮೀಶ್ ದೇವರಕಳಿಯ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ಶಿವಪ್ರಸಾದ್ ಕೇರ್ಪಳ, ಕೇರ್ಪಳ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಮ ಕೇರ್ಪಳ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಶೋಭಾ, ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಮಲಾಕ್ಷ ಕೇರ್ಪಳ ಹಾಗೂ ವಿದ್ಯಾರ್ಥಿಗಳು, ಪೋಷಕರು, ಯುವಕ ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೊನ್ನಮ್ಮ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ವಾಣಿ ವಂದಿಸಿದರು.







