













ಉಬರಡ್ಕಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ 80 ನೇ ವರ್ಷದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.
ಗ್ರಾ.ಪಂಚಾಯತ್ ಪಿ.ಡಿ.ಒ ರವಿಚಂದ್ರರವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಮಾಜಿ ಉಪಾಧ್ಯಕ್ಷ ಪ್ರಶಾಂತ್ ಪಾನತ್ತಿಲ, ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಉಬರಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪಿ.ಎಸ್ ಗಂಗಾಧರ, ಸಹಕಾರಿ ಸಂಘದ ಉಪಾಧ್ಯಕ್ಷ ವಿಜಯಕುಮಾರ್ ಉಬರಡ್ಕ ಹಾಗೂ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.







