ವಂದೇ ಮಾತರಂ ಹಾಡಿನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

ಸುಳ್ಯ ನ್ಯಾಯಾಲಯದ ಆವರಣದಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಆಗಸ್ಟ್ 15ರಂದು ನಡೆಯಿತು. ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಧೀಶರಾದ ಶ್ರೀಮತಿ ಟಿ.ದಮಯಂತಿ ಸೋಮಯ್ಯರವರು ನೆರವೇರಿಸಿ ಶುಭ ಹಾರೈಕೆಯ ನುಡಿಗಳನ್ನಾಡಿದರು. ನ್ಯಾಯಾಂಗವು ಸಂವಿಧಾನ ಮತ್ತು ಕಾನೂನಿನ ಆಧಾರದ ಮೇಲೆ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.















ಸಮಾಜದಲ್ಲಿ ಕಾನೂನು ಅರಿವು ಹೆಚ್ಚಿಸುವುದು ಹಾಗೂ ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಅರಿತುಕೊಳ್ಳುವುದು ಅಗತ್ಯ ಎಂದು ಹೇಳಿದರು. ಸಿವಿಲ್ ನ್ಯಾಯಾಧೀಶರಾದ ಸುರೇಶ್ ಇ ಎಸ್ ಹಾಗೂ ವಕೀಲರ ಸಂಘದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರಾದ ಕು. ಪ್ರೀತಿ ಹಾಗೂ ಹಿರಿಯ ಮತ್ತು ಕಿರಿಯ ವಕೀಲರು, ನ್ಯಾಯಾಲಯದ ಸಿಬ್ಬಂದಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಕೀಲರ ಸಂಘದ ಕಾರ್ಯದರ್ಶಿ ಜಗದೀಶ್ ಡಿಪಿ ಸ್ವಾಗತಿಸಿ,c ವಕೀಲರಾದ ಕುಸುಮದರ ವಂದಿಸಿದರು.







