ಬೆಳ್ಳಾರೆ ಝಕರಿಯ್ಯಾ ಜುಮಾ ಮಸೀದಿಯಲ್ಲಿ 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ

0

ಬೆಳ್ಳಾರೆ ಝಕರಿಯ್ಯಾ ಜುಮಾ ಮಸೀದಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಜಮಾತ್ ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಹಾಗೂ ಖತೀಬರಾದ ನಸೀಹ್ ದಾರಿಮಿ ಯವರು ಧ್ವಜಾರೋಹಣ ಗೈದರು. ಕಾರ್ಯಕ್ರಮದಲ್ಲಿ ಬೆಳ್ಳಾರೆ ಮದ್ರಸಾದ ಮುಖ್ಯೋಪಾಧ್ಯಾಯರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಳೆ ರವರು ಸ್ವಾಗತ ಹಾಗೂ ಪ್ರಾಸ್ತಾವಿಕ ಭಾಷಣ ಮಾಡಿದರು. ಖತೀಬರಾದ ಬಹು ನಸೀಹ್ ದಾರಿಮಿ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಜಮಾತಿನ ಪದಾಧಿಕಾರಿಗಳು, ಜಮಾತರು ಅದೇ ರೀತಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಜಮಾತ್ ಕಾರ್ಯದರ್ಶಿ ಬಶೀರ್ ಕಲ್ಲಪಣೆ ವಂದಿಸಿದರು.