ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಆ.15 ರಂದು ನಡೆಯಿತು. ಗ್ರಾಮ ಪಂಚಾಯತ್ ಲೆಕ್ಕ ಸಹಾಯಕಿ ಶ್ರೀಮತಿ ಸುಶೀಲರವರು ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮಾಧವ ಗೌಡ ಕಾಮಧೇನು,ಎನ್.ಎಸ್.ಡಿ.ವಿಠಲದಾಸ್ ರವರು ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ,ಅಮರ ಸುಳ್ಯ ಸಮರ ಸಮಿತಿ ಅಧ್ಯಕ್ಷ ಚಂದ್ರಕೋಲ್ಚಾರ್,ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ.ಎಂ, ರೋಟರಿ ಪದಾಧಿಕಾರಿಗಳು,ಪಂಚಾಯತ್ ಮಾಜಿ ಉಪಾಧ್ಯಕ್ಷರು,ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ಹರೀಶ್ ಸ್ವಾಗತಿಸಿದರು.