














ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ದೀಕ್ಷಿತ ರಮೇಶ್ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಸತೀಶ್ ಕೂಜುಗೋಡು ಸದಸ್ಯರಾದ ರಂಗಯ್ಯ ಶೆಟ್ಟಿಗಾರ್, ಶ್ರೀಮತಿ ವಿಮಲ ರಂಗಯ್ಯ, ಡಾl ಶಿವಕುಮಾರ್ ಹೊಸೋಳಿಕೆ, ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಪವನ್ ಮತ್ತಿತರರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಾಲಾ ಪುಟಾಣಿಗಳು ಹೆತ್ತವರು ಹಾಗೂ ಊರಿನವರು ಭಾಗವಹಿಸಿದರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಗುಣ ವಿ,ಇವರು ಸ್ವಾಗತಿಸಿ ಕೊನೆಯಲ್ಲಿ ಧನ್ಯವಾದ ಸಮರ್ಪಿಸಿದರು.







