ಉದ್ದಂತಡ್ಕ ಶಾಲಾ ಮಕ್ಕಳಿಗೆ ಬ್ಯಾಗ್, ತಟ್ಟೆ ಹಾಗೂ ಸಿಹಿ ವಿತರಣೆ














ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಸುಳ್ಯ ವಲಯ ಸಮಿತಿಯ ವತಿಯಿಂದ
ಭಾರತದ ೮೦ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸುಳ್ಯ ವಲಯದ ಪದಾಧಿಕಾರಿಗಳು ಹಾಗೂ ಸದಸ್ಯರು ಉದ್ದಂತಡ್ಕ ಸರ್ಕಾರಿ ಶಾಲೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಗ್ರಾಮಸ್ಥರು ಹಾಗೂ ಮಕ್ಕಳೊಂದಿಗೆ ಪಾಲ್ಗೊಂಡರು.
ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಸಿಹಿ ವಿತರಣೆ:
ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ, ಸಂಘದ ವತಿಯಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ
ಶಾಲಾ ಬ್ಯಾಗ್ಗಳು, ಮಧ್ಯಾಹ್ನದ ಬಿಸಿಯೂಟಕ್ಕಾಗಿ ಊಟದ ತಟ್ಟೆಗಳು, ವಿಶೇಷ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಎಸ್ಕೆಪಿಎ ಸುಳ್ಯ ವಲಯದ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ಕೆಪಿಎ ಸುಳ್ಯ ವಲಯದ ಅಧ್ಯಕ್ಷ ಶಶೀ ಗೌಡ ಅವರು, “ಫೋಟೋಗ್ರಾಫರ್ಗಳ ಸಂಘವು ಕೇವಲ ವೃತ್ತಿಪರ ಕಾರ್ಯಗಳಿಗೆ ಸೀಮಿತವಾಗಿರದೆ, ಶೈಕ್ಷಣಿಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುತ್ತಾ ಬಂದಿದೆ.
ಗ್ರಾಮೀಣ ಭಾಗದ ಶಾಲಾ ಮಕ್ಕಳೊಂದಿಗೆ ಸ್ವಾತಂತ್ರ್ಯ ದಿನವನ್ನು ಆಚರಿಸಿ ಅವರ ಶೈಕ್ಷಣಿಕ ಅಗತ್ಯಗಳಿಗೆ ನೆರವಾಗುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ಕೆಪಿಎ ಸುಳ್ಯ ವಲಯದ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಪದಾಧಿಕಾರಿಗಳು ಹಾಗೂ ಸಂಘದ ಸರ್ವ ಸದಸ್ಯರು ಇದ್ದರು.







