













ದ ಕ ಜಿ ಪಂ ಸ ಹಿ ಪ್ರಾ ಶಾಲೆ ಗೂನಡ್ಕದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರವೀಂದ್ರ ಎನ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಸಂಪಾಜೆ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸುಮತಿ ಶಕ್ತಿವೇಲು, ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಎಸ್.ಕೆ ಹನೀಫ್, ಮಾಜಿ ಗ್ರಾ.ಪಂ.ಸದಸ್ಯರಾದ ಶ್ರೀಮತಿ ಪ್ರಸಾದ್ ಹಾಗೂ ಶ್ರೀಮತಿ ಅನುಮಪ, ನಿವೃತ್ತ ಮುಖ್ಯೋಪಾಧ್ಯಾಯರು ಭವಾನಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರು ಭವಾನಿ ಶಂಕರ್ ಹಾಗೂ ಸಹ ಶಿಕ್ಷಕರು ಅಕ್ಷರ ದಾಸೋಹ ಸಿಬ್ಬಂದಿಗಳು ಹಾಗೂ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







