ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

0

80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ ಖಾದರ್ ಮೊಟ್ಟೆಂಗಾರ್ ಇವರು ಧ್ವಜಾರೋಹಣ ಕಾರ್ಯಕ್ರಮವನ್ನು ನೇರವೇರಿಸಿದರು.


ಸ್ವಾತಂತ್ರ್ಯೊತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಮತ್ತು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ವಿದ್ಯಾರ್ಥಿಗಳು ದೇಶ ಭಕ್ತಿಯನ್ನು ಸಾರುವ ವಿವಿಧ ನೃತ್ಯ ಮತ್ತು ಹಾಡುಗಳಲ್ಲಿ ಭಾಗಿಯಾದರು.‌
ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ, ಸಹ ಶಿಕ್ಷಕಿಯರಾದ ಅಸೀನಾ, ಮಿಸಿರಿಯಾ,ದಿಲ್ ಶಾನಾ, ಬುಶ್ರಾ ಕೆ ಎಂ, ಇಶಾನಾ ಹಾಗೂ ‘ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳೆಲ್ಲರಿಗೂ ಸಿಹಿಯನ್ನು ವಿತರಿಸಲಾಯಿತು.