













ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ ಮುರುಳ್ಯ ಶಾಂತಿನಗರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ ಧ್ವಜಾರಾಹೋಣ ನೆರವೇರಿಸಿಕೊಟ್ಟರು. ನಂತರ ಮುರುಳ್ಯ ಶಾಂತಿನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳು ವಂದೇ ಮಾತರಂ, ಇಂಕ್ವಿಲಾಬ್ ಜಿಂದಾಬಾದ್, ಭಾರತ್ ಮಾತಾಕೀ ಜೈ ಎಂಬ ಘೋಷವಾಕ್ಯಗಳನ್ನು ಮೊಳಗಿಸಿದರು. ಊರಿನ ವರ್ತಕರು ಹಾಗೂ ಪೋಷಕರು ಮಕ್ಕಳಿಗೆ ಸಿಹಿತಿಂಡಿ ನೀಡಿದರು. ಮೆರವಣಿಗೆ ನಂತರ ಸಭಾಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪೋಷಕರು, ಊರಿನವರು ಭಾಗವಹಿಸಿದರು. ಮುಖ್ಯಗುರುಗಳಾದ ಶ್ರೀಮತಿ ಸೀತಾ ವಿ, ಹಿರಿಯ ಶಿಕ್ಷಕಿ ಶ್ರೀಮತಿ ಉಷಾ ಎಸ್, ಸಹಶಿಕ್ಷಕರಾದ ಕು.ಹರ್ಷಿತ, ಶಶಿಕುಮಾರ್ ಕೆ.ಎಸ್, ಶ್ರೀಮತಿ ಶಾಲಿನಿ, ಶ್ರೀಮತಿ ಶಕುಂತಳಾ, ಶ್ರೀಮತಿ ಲಿಕ್ಷೀತಾ ಉಪಸ್ಥಿತರಿದ್ದರು.







