














ಆಲೆಟ್ಟಿ ನಾರ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಆ.15 ರಂದು ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ಈ ಸಂದರ್ಭದಲ್ಲಿ 1 ನೇ ತರಗತಿಯ ವಿದ್ಯಾರ್ಥಿ ಗಳಿಗೆ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಐ.ಡಿ ಕಾರ್ಡ್ ವಿತರಿಸಲಾಯಿತು. ರೊ.ಹೇಮಂತ್ ಕಾಮತ್,
ನಿಕಟ ಪೂರ್ವಾಧ್ಯಕ್ಷ ರೊ.ಗಿರೀಶ್ ನಾರ್ಕೋಡು, ಶಾಲೆಯ ಮುಖ್ಯ ಶಿಕ್ಷಕಿ ಲೋಲಾಕ್ಷಿ ಪಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಾಲಚಂದ್ರ ಏಣಾವರ ಮತ್ತು ಸದಸ್ಯರು ಹಾಗೂ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.







