ಎಣ್ಮೂರು ಗ್ರಾಮದ ಎಣ್ಮೂರು ಸ ಹಿ ಪ್ರಾ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಅಬ್ದುಲ್ ಷರೀಫ್ ರವರು ಧ್ವಜಾರೋಹಣ ನೆರವೇರಿಸಿದರು. ಮಕ್ಕಳು ಪೋಷಕರು. ಊರವರು, ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.














ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ರೈ ಅವರು ದಿನದ ವಿಶೇಷದ ಕುರಿತು ಮಾತನಾಡಿದರು.
ಮಕ್ಕಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ, ದೇಶಭಕ್ತಿ ಗೀತೆ ಮತ್ತು ನೃತ್ಯಗಳನ್ನು ಮಾಡಿದರು. ಸಭೆಯ ಅಧ್ಯಕ್ಷ ಸ್ಥಾನವನ್ನು ಎಸ್ಡಿಎಂಸಿ ಅಧ್ಯಕ್ಷ ಅಬ್ದುಲ್ ಶರೀಫ್ ಅವರು ವಹಿಸಿಕೊಂಡಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಭುವನೇಶ್ವರಿ ಸ್ವಾಗತಿಸಿದರು. ಗೌರವ ಶಿಕ್ಷಕಿ ಶ್ರೀಮತಿ ಲತಾಕುಮಾರಿ ಕಾರ್ಯಕ್ರಮ ನಿರ್ವಹಿಸಿದ್ದರು. ಸಹ ಶಿಕ್ಷಕಿ ಶ್ರೀಮತಿ ಸುರೇಖರವರು ವಂದಿಸಿದರು. ಅತಿಥಿ ಶಿಕ್ಷಕರಾದ ಸುದರ್ಶನ್ ಮತ್ತು ರೇಷ್ಮಾ ಸಹಕರಿಸಿದರು.







