ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಪ್ರೌಢಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ

0


ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಗುತ್ತಿಗಾರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಯೋಧ ಧನಂಜಯ ಅವರು ಆಗಮಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ರಾಷ್ಟ್ರಗೀತೆ ಹಾಡಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನಕಟ್ಟೆ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರದ ಬಗ್ಗೆ ಜವಾಬ್ದಾರಿಯ ಭಾವನೆ ಬೆಳೆಸುವಂತೆ ಪ್ರೇರಣಾದಾಯಕವಾಗಿ ಮಾತನಾಡಿದರು.

ನಂತರ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ನೃತ್ಯ, ಭಾಷಣ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಮನೋಜ್ಞವಾಗಿ ಪ್ರದರ್ಶನಗೊಂಡವು. ವಿದ್ಯಾರ್ಥಿಗಳ ಪ್ರತಿಭೆ ಮತ್ತು ದೇಶಭಕ್ತಿಯ ಪ್ರದರ್ಶನವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಶಾಲೆಯ ಶಿಕ್ಷಕರು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.