














ದೇವಚಳ್ಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂದ್ರಪ್ಪಾಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಮುಖ್ಯ ಗುರುಗಳಾದ ಶ್ರೀಮತಿ ವಾಣಿ ಕೆ ಎಸ್ ರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಧ್ವಜಾರೋಹಣ ಕಾರ್ಯಕ್ರಮವನ್ನು ಕಂದ್ರಪ್ಪಾಡಿ ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ನೆರವೇರಿಸಿ ಕಾರ್ಯಕ್ರಮವನ್ನು ಕುರಿತು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಅವರ ತ್ಯಾಗ ಬಲಿದಾನಗಳನ್ನು ವಿವರಿಸಿದರು. ಯುವ ಜನ ಸಂಯುಕ್ತ ಮಂಡಳಿ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದೇಶಭಕ್ತಿ ಗೀತೆ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಆಶಾರಾಣಿ ಹೆಚ್ ಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಇವರು ನಿರೂಪಿಸಿದರು. ಗೌರವ ಶಿಕ್ಷಕರಾದ ಸುಷ್ಮಾ ರವರು ವಂದಿಸಿದರು ಮತ್ತು ಶಾಲಾ ಮಕ್ಕಳು ಮತ್ತು ಆಗಮಿಸಿದಂತೆ ಎಲ್ಲಾ ಅತಿಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.







