













ಕೊಡಗು ಸಂಪಾಜೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಜಗದೀಶ ಪರಮಲೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಂಪಾಜೆ ಗೇಟಿನವರೆಗೆ ಪಥ ಸಂಚಲನ ಕಾರ್ಯಕ್ರಮ ನಡೆಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಶ್ರೀಮತಿ ಮೌನ ಅವರು ಸ್ವಾತಂತ್ರ್ಯದಿನಾಚರಣೆಯ ಮಹತ್ವದ ಬಗ್ಗೆ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ರೋಹಿಣಿ , ದೈಹಿಕ ಶಿಕ್ಷಕಿ ಕವಿತಾ ಕುಮಾರಿ , ಎಸ್. ಡಿ.ಎಂ.ಸಿ ಸದಸ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಪಾಧ್ಯಾಯರು ಶ್ರೀಮತಿ ಹಂಸ ಕಲಾ , ಶ್ರೀಮತಿ ಶಾಹಿರಾ ವಂದಿಸಿ, ಚೇತನ್. ಬಿ. ಎಲ್ ಕಾರ್ಯ ಕ್ರಮ ನಿರೂಪಿಸಿದರು. ಕೊನೆಗೆ ಸಿಹಿ ತಿಂಡಿ ವಿತರಿಸಲಾಯಿತು.







