ಕಲ್ಲಡ್ಕ – ಪೆರಾಜೆ ಸ್ವಾತಂತ್ರ್ಯ ದಿನಾಚರಣೆ

0

ಮಂಡೆಕೋಲು ಗ್ರಾಮದ ಕಲ್ಲಡ್ಕ -ಪೆರಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಚಂದ್ರವತಿಯವರು ನೆರವೇರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೇಣುಗೋಪಾಲ್ ರವರು ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಶೋಭಾ ಅವರು ಸ್ವಾಗತಿಸಿದರು. ವೇದಿಕೆಯಲ್ಲಿ ಶಾಸ್ತಾವು ದೇವಸ್ಥಾನದ ಆಡಳಿತ ಸದಸ್ಯರಾದ ವಿಶ್ವಾಸ ರವರು ಶಾಸ್ತ್ರವು ಫ್ರೆಂಡ್ಸ್ ತಂಡದ ಅಧ್ಯಕ್ಷರಾದ ಸುಧಾಕರ ರವರು ಯುವ ಸೇವಾ ಮಂಡಳಿಯ ಸದಸ್ಯರು, ಕಾರ್ಯಕರ್ತರು ಅಧ್ಯಕ್ಷ ಪೋಷಕರು ಶಾಲಾ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಶಿಕ್ಷಕಿಯಾದ ಲೀಲಾವತಿ ವಂದನಾರ್ಪಣೆ ಮಾಡಿದರು. ಶಾಲಾ ಶಿಕ್ಷಕಿ ಸಪ್ನ ಕಾರ್ಯಕ್ರಮ ನಿರೂಪಿಸಿದರು