















ಅಜ್ಜಾವರ ಗ್ರಾಮದ ಅಡ್ಪಂಗಾಯ ಸ.ಪ. ಪ್ರಾ. ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಅಬ್ಬಾಸ್ ಎ. ಬಿ. ಧ್ವಜಾರೋಹಣ ಗೈದರು.
ಶಾಲೆಯ ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷರಾದ ಅಶ್ರಫ್ ಸ ಅದಿ ಯವರು ಧ್ವನಿವರ್ಧಕ ಕೊಡುಗೆಯಾಗಿ ನೀಡಿದರು. ಬಳಿಕ ಅವರನ್ನು ಗೌರವಿಸಲಾಯಿತು.
ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಇಲ್ಯಾಸ್ .ಎಂ, ಹಿರಿಯ ವಿದ್ಯಾರ್ಥಿಗಳಾದ ಪದ್ಮನಾಭ ಅತ್ಯಾಡಿ ಮತ್ತು ಹಸೈನಾರ್ ಮಡಿಕೇರಿ ಮಾತನಾಡಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಶ್ರೀಮತಿ ಲೀಲಾ ಮನಮೋಹನ್ ಅವರ ಸಹಕಾರದಿಂದ ಸುಬ್ರಹ್ಮಣ್ಯ ಕ್ಷೇತ್ರದಿಂದ ತರಲಾದ ಸಿಹಿ ತಿಂಡಿಯನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪದ್ಮಾವತಿ ಎ. ಸ್ವಾಗತಿಸಿದರು







