ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ : ಮಾಹಿತಿ

0

ಈ ಹಿಂದೆ ಇಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ ಫಲಾನುಭವಿಗಳಿಗೆ ಪುನಃ ಇಕೆವೈಸಿ ಮಾಡಿಸಲು ಆಯುಕ್ತರು ಸೂಚಿಸಿದ್ದಾರೆ. ಈ ಕುರಿತು ನ್ಯಾಯಬೆಲೆ ಅಂಗಡಿವಾರು ಫಲಾನುಭವಿಗಳ ಪಟ್ಟಿ ತಯಾರಿಸಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಈಗಾಗಲೇ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಸುಳ್ಯ ತಾಲೂಕಿನಲ್ಲಿ ಒಟ್ಟು 41630 ಫಲಾನುಭವಿಗಳಿದ್ದು, ಕೂಡಲೇ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರು ತಮ್ಮ ತಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳತಕ್ಕದ್ದು. ತಪ್ಪಿದಲ್ಲಿ ಮುಂದಕ್ಕೆ ಪಡಿತರ ಪಡೆಯಲು ಸಮಸ್ಯೆಯಾಗಬಹುದು ಎಂದು ಆಹಾರ ಇಲಾಖೆ ಪ್ರಕಟಣೆ ತಿಳಿಸಿದೆ.