ಕರಿಕಳ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ

0

ಕರಿಕಳಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
80ನೇ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.


ಧ್ವಜಾರೋಹಣ ಕಾರ್ಯಕ್ರಮವನ್ನು
ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಕುಸುಮಾಧರ ಕೆರೆಯಡ್ಕ ಅವರು ನೆರವೇರಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ರಫೀಕ್ ಐವತ್ತೊಕ್ಲು ಭಾಗವಹಿಸಿ ಶುಭ ಹಾರೈಸಿದರು, ಎಸ್ ಡಿ ಮ್ ಸಿ ಸದಸ್ಯರಾದ ದಿನೇಶ್ ಪುಂಡಿಮನೆ ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯಶಿಕ್ಷಕರಾದ ಚಂದನ್ ಪಿ ಎಸ್ ವಿದ್ಯಾರ್ಥಿಗಳಿಗೆ ಶುಭಕೋರಿದರು.
ನಂತರದಲ್ಲಿ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸ್ವಾತಂತ್ರದಿನದ ಕುರಿತು ಭಾಷಣ ಮತ್ತು ದೇಶ ಭಕ್ತಿಗೀತೆಯನ್ನು ಹಾಡಿಸಲಾಯಿತು.
ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಎಸ್ ಡಿ ಮ್ ಸಿ ಸದಸ್ಯರು, ಪೋಷಕರು, ಅಂಗನವಾಡಿ ಕಾರ್ಯಕರ್ತೆಯಾದಂತಹ ಲೀಲಾವತಿ ಹಾಗೂ ಅಂಗನವಾಡಿ ಪುಟಾಣಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.