














ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 80ನೇ ವರ್ಷದ ಸ್ವಾತಂತ್ರತ್ರ್ಯೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಎಒಎಲ್ಇ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರತ್ರ್ಯೋತ್ಸವದ ಸಂದೇಶವನ್ನು ಸಾರುತ್ತಾ ಇಂದು ನಮ್ಮೆಲ್ಲರಿಗೂ ಹೆಮ್ಮೆಯ ದಿನ. ಅನೇಕ ಮಹನೀಯರ ತ್ಯಾಗ, ಹೋರಾಟ ಮತ್ತು ಬಲಿದಾನದ ಫಲವಾಗಿ ನಾವು ಸ್ವಾತಂತ್ರ್ಯವನ್ನು ಪಡೆದಿದ್ದೇವೆ. ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನಾವು ಸದಾ ಸ್ಮರಿಸಬೇಕು. ಇಂದು ಭಾರತವು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಕೃಷಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ನಮ್ಮ ದೇಶವನ್ನು ಇನ್ನಷ್ಟು ಬಲಿಷ್ಠ ಮತ್ತು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಕಾರ್ಯಕ್ರಮದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಸಿ. ರಾಮಚಂದ್ರ ಭಟ್, ಸಹ ಸಂಸ್ಥೆಗಳ ಪ್ರಾಂಶುಪಾಲರುಗಳಾದ ಡಾ. ನಮ್ರತಾ ಕೆ.ಜಿ, ಡಾ. ನವ್ಯ ಬಿ.ಎನ್, ಡಾ. ಪ್ರಮೋದ್ ಕೆ.ಜೆ, ಚಂದ್ರಾವತಿ ಕೆ.ಎಸ್, ಡಾ.ಮನೀಶ್, ಎಮರ್ಜೆನ್ಸಿ ಮೆಡಿಸಿನ್ ವಿಭಾಗ ಮುಖ್ಯಸ್ಥರಾದ ಡಾ. ಹೆರಾಲ್ಡ್ ಲಿವೀಸ್ ಸೇರಿದಂತೆ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಹಾಗೂ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದ್ವಜಾರೋಹಣದ ಬಳಿಕ ದೇಶಭಕ್ತಿಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.







