













ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಡಿ.ಸಿ.ಸಿ.ಬ್ಯಾಂಕಿನಿಂದ ನೀಡಿ ಗೌರವಿಸಲಾಯಿತು.
ಆ.22 ರಂದು ನಡೆದ ಡಿ.ಸಿ.ಬ್ಯಾಂಕ್ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುನಂದ ಐ.ಆಳ್ವರವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿ,ನಿರ್ದೇಶಕರಾದ ಕರುಣಾಕರ ಆಳ್ವ, ವಾಸುದೇವ ನಾಯಕ್,ಬಿಯಾಳು,ಜನಾರ್ಧನ ಆರ್ವಾರ,ಭಾಸ್ಕರ ನೆಟ್ಟಾರು, ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.







