ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿರಂತರ ವೈದ್ಯಕೀಯ ಶಿಕ್ಷಣ (CME) ಕಾರ್ಯಕ್ರಮ ಮೈಕ್ರೋಸ್ಪಿಯರ್–2026

0

ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೈಕ್ರೋಬಯಾಲಜಿ ವಿಭಾಗದ ವತಿಯಿಂದ ಸಂಸ್ಥೆಯ ಬೆಳ್ಳಿ ಮಹೋತ್ಸವದ ಅಂಗವಾಗಿ “ಮೈಕ್ರೋಸ್ಪಿಯರ್–2026” ಎಂಬ ನಿರಂತರ ವೈದ್ಯಕೀಯ ಶಿಕ್ಷಣ (CME) ಕಾರ್ಯಕ್ರಮ ಆ.25ರಂದು ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಒಎಲ್ಇ ಅಧ್ಯಕ್ಷ ಹಾಗೂ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ. ಚಿದಾನಂದ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಾರ್ಯಕ್ರಮದ ಸಂಘಟನಾ ಅಧ್ಯಕ್ಷರಾದ ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ. ಮಂಟೂರ್, ಸಂಘಟನಾ ಕಾರ್ಯದರ್ಶಿ ಪ್ರೊಫೆಸರ್ ಡಾ. ನಮ್ರತಾ ಕೆ.ಜಿ, ಯೆನೆಪೊಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಮಂಗಳೂರಿನ ಮೈಕ್ರೋಬಯಾಲಜಿ ವಿಭಾಗದ ಪ್ರಾಧ್ಯಾಪಕಿ ಡಾ. ವಿದ್ಯಾ ಪೈ,ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್‌ನ ಡಾ. ದೀಪಶ್ರೀ ಆರ್, ಯೆನೆಪೊಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ. ರೌಚೆಲ್ ಟೆಲ್ಲಿಸ್, ಮಂಗಳೂರು ಕಸ್ತೂರ್ಬಾ ಮೆಡಿಕಲ್ ಕಾಲೇಜು ಡಾ. ಸುಚಿತ್ರಾ ಶೆಣೈ ಹಾಗೂ ಬಯೋಮೆರಿಯಕ್ಸ್ ಇಂಡಿಯಾದ ಅಪ್ಲಿಕೇಶನ್ ಸಪೋರ್ಟ್ ಮ್ಯಾನೇಜರ್ ಶಂತನು ಟಾಕ್ಲೆ ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ವೈದ್ಯಕೀಯ ಅಧಿವೇಶನ ನಡೆಯಿತು “Rapid Diagnosis – Appropriate Antibiotic Choice – Remarkable Clinical Outcome” ಎಂಬ ವಿಷಯದ ಕುರಿತಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸೋಂಕು ರೋಗಗಳ ತ್ವರಿತ ಮತ್ತು ನಿಖರ ರೋಗನಿರ್ಣಯ, ಸೂಕ್ತ ಪ್ರತಿಜೀವಕಗಳ ಆಯ್ಕೆ ಹಾಗೂ ಉತ್ತಮ ಚಿಕಿತ್ಸಾ ಫಲಿತಾಂಶಗಳ ಕುರಿತು ತಜ್ಞರು ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದ ಅಂಗವಾಗಿ ಸಂಶೋಧನಾ ವಿಷಯಗಳ ಮೌಖಿಕ ಹಾಗೂ ಪೋಸ್ಟರ್ ಪ್ರಸ್ತುತಿಗಳು ನಡೆದವು. ವಿದ್ಯಾರ್ಥಿನಿಯರಾದ ಶ್ರದ್ಧಾ ದೀಕ್ಷಾ ಹಾಗೂ ಸುಪ್ರೀತಾ ಪ್ರಾರ್ಥಿಸಿದರು. ಕಾರ್ಯಕ್ರಮದ ಸಂಘಟನಾ ಅಧ್ಯಕ್ಷರಾದ ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ. ಮಂಟೂರ್ ಸ್ವಾಗತಿಸಿ, ಪ್ರೊ. ಡಾ. ನಮ್ರತಾ ಕೆ.ಜಿ ವಂದಿಸಿದರು. ಉಪನ್ಯಾಸಕಿಯರಾದ ಅಕ್ಷಿತಾ ಹಾಗೂ ಭಾಮಿನಿ ಕಾರ್ಯಕ್ರಮ ನಿರೂಪಿಸಿದರು. ಡಾ. ಕಾರ್ತಿಕ್ ಎಂ.ಬಿ ಹಾಗೂ ಡಾ. ಪ್ರಸಾದ್ ಕಿಸನ್ ಕಾರ್ಯಕ್ರಮದ ಸಂಘಟನಾ ಸಮಿತಿಯ ಸದಸ್ಯರಾಗಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.

ಕಾರ್ಯಕ್ರಮದಲ್ಲಿ ಡಾ. ಸುಬ್ರಮಣ್ಯ ಭಟ್, ಡಾ. ಸತ್ಯವತಿ ಆರ್ ಆಳ್ವ, ಡಾ. ಗೀತಾ ದೊಪ್ಪ, ಡಾ. ಪ್ರಮೋದ್ ಕೆ ಜೆ, ಡಾ. ಮನೀಶ್, ಡಾ. ರಂಜಿತ್ ಕೆ.ಬಿ ಡಾ. ಸಂದೇಶ್ ಕೆ ಎಸ್, ಡಾ. ಸಾಯಿಗೀತಾ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.