ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ, ಪಿಎಂಶ್ರೀ ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇವರ ಸಹಭಾಗಿತ್ವದಲ್ಲಿ ಆಯೋಜಿಸಿದ ಬುಲ್ಬುಲ್ಸ್, ಕಬ್ಸ್, ಸ್ಕೌಟ್ಸ್ ಹಾಗೂ ಗೈಡ್ಸ್ ವಿಭಾಗದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆ. 27 ರಂದು ಪಿ.ಎಂ.ಶ್ರೀ ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.














ಉದ್ಯಮಿ ಅಶೋಕ್ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯದ ಅಧ್ಯಕ್ಷ ಶಶಿಧರ ಎಂ.ಜೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ರಾಜು ಪಂಡಿತ್, ಮಾಧವ ಮಡಪ್ಪಾಡಿ, ಪಿ.ಎಂ.ಶ್ರೀ ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುನಂದಾ ಶೆಟ್ಟಿ, ಗೈಡ್ಸ್ ಜಿಲ್ಲಾ ಆಯುಕ್ತೆ ಪ್ರೇಮಲತಾ, ಎಸ್ಡಿಎಂಸಿ ಅಧ್ಯಕ್ಷ ರವಿರಾಜ್ ಅಡ್ಕಾರು ಉಪಸ್ಥಿತರಿದ್ದರು.

ಸುಳ್ಯ ಸ್ಥಳೀಯ ಸಂಸ್ಥೆ, ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ಕ್ಲಸ್ಟರ್ ಸಿಆರ್ ಪಿ ಮಮತಾ ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೆಪಿಎಸ್ ಸುಳ್ಯದ ಸಹಶಿಕ್ಷಕಿ ಹಾಗೂ ಹಿಮಾಲಯ ವುಡ್ಬ್ಯಾಡ್ಜ್ ತರಬೇತಿ ಪಡೆದ ಪೂರ್ಣಿಮಾ ತಂಟೆಪ್ಪಾಡಿ ಸ್ವಾಗತಿಸಿದರು. ರೋಟರಿ ಶಾಲೆಯ ಕಲಾ ಶಿಕ್ಷಕ, ಸ್ಕೌಟ್ಸ್ ಶಿಕ್ಷಕ ಶ್ರೀಹರಿ ಪೈಂದೋಡಿ
ವಂದಿಸಿದರು. ಸ್ಕೌಟ್ಸ್ ಶಿಕ್ಷಕ ಜೀವನ್ ಕಾರ್ಯಕ್ರಮ ನಿರೂಪಿಸಿದರು.







