














ಉಬರಡ್ಕಮಿತ್ತೂರಿನ ಶ್ರೀ ನಂದಿನಿ ಮಹಿಳಾ ಮಂಡಲ ಇದರ ಆಶ್ರಯದಲ್ಲಿ 16 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.28 ರಂದು ಉಬರಡ್ಕದ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಿತು.
ಶ್ರೀಮತಿ ಶ್ರೀದೇವಿ ನಾಗರಾಜ್ ಭಟ್ ವರಮಹಾಲಕ್ಷ್ಮೀ ಹಬ್ಬ ಮತ್ತು ರಕ್ಷಾಬಂಧನದ ಮಹತ್ವವನ್ನು ತಿಳಿಸಿದರು. ಮಹಿಳಾ ಮಂಡಲದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು.







