ಡಾ.ಕೆ.ವಿ.ಚಿದಾನಂದ ರಿಂದ ಉತ್ಸವಕ್ಕೆ ಚಾಲನೆ















ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾಸಮಿತಿ,ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರಆಶ್ರಯದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 58 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು “ಸಮಾಜ ಸಂಘಟನೆ ಮತ್ತು ಧರ್ಮ ಜಾಗೃತಿಗಾಗಿ” ಎಂಬ ಆಶಯದೊಂದಿಗೆ ಸೆ. 14 ರಿಂದ ಮೊದಲ್ಗೊಂಡು
ಸೆ. 18 ರ ತನಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದ್ದು, ಸೆ.14 ರಂದು ಬೆಳಗ್ಗೆ ಉತ್ಸವದ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಸೆ .14 ರಂದು ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ನಂತರ ಶ್ರೀ ಗಣೇಶನ ಮೂರ್ತಿಯ ಪ್ರತಿಷ್ಠಾ ಕಾರ್ಯವು ನಡೆಯಿತು. ಬಳಿಕ ಉತ್ಸವದ ಉದ್ಘಾಟನಾ ಸಮಾರಂಭವು ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಕೆ .ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ರವರು ದೀಪ ಪ್ರಜ್ವಲಿಸಿದರು.
ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮಂಡಳಿ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ರವರು ಶುಭ ಹಾರೈಸಿದರು.
ಶ್ರೀಮತಿ ಚಂದ್ರಾಕ್ಷಿ ರೈ, ಶ್ರೀಮತಿ ಗಿರಿಜಾ, ಶ್ರೀಮತಿ ವೀಣಾ ರವರು ಪ್ರಾರ್ಥನೆ ನೆರವೇರಿಸಿದರು.
ಸಾರ್ವಜನಿಕ ದೇವತಾರಾಧನಾ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಗೋಪಾಲಕೃಷ್ಣ ಕೆ.ಎಸ್ ವಂದಿಸಿದರು. ಶಶಿದರ ಎಂ.ಜೆ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಮಕ್ಕಳ ಭಜನಾ ಸ್ಪರ್ಧೆಗೆ ಚಾಲನೆ ನೀಡಲಾಯಿತು.







