













ಕೆ ಪೆರಾಜೆ ಗ್ರಾಮದ ಕೊಡ್ಯಗುಂಡಿಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಸೆ .15 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಕಾಲೋನಿಯ ಅಭಿವೃದ್ಧಿ ,ವಿವಿಧ ಕಾಮಗಾರಿಗಳ ಬಗ್ಗೆ ಕಾಲೋನಿ ನಿವಾಸಿಗಳ ಜೊತೆ ಚರ್ಚಿಸಿ ಅಹವಾಲುಗಳನ್ನು ಸ್ವೀಕರಿಸಲಾಯಿತು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಜೊತೆ ಗ್ರಾಮದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕರನ್ನು ಕ್ಷೇತ್ರದ ವತಿಯಿಂದ ಶಾಲು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು, ಜಯರಾಮ್ ಪೆರುಮುಂಡ, ಹರಿಪ್ರಸಾದ್ ಪೆರಂಗಜೆ ಮತ್ತು ಇತರ ಮುಖಂಡರುಗಳು ಮತ್ತು ಕಾಲೋನಿಯ ನಿವಾಸಿಗಳು ಹಾಜರಿದ್ದರು.







