













ದಕ್ಷಿಣ ಕನ್ನಡ ಜಿಲ್ಲೆಯ ಅತಿ ವೇಗವಾಗಿ ಬೆಳೆಯುತ್ತಿರುವ ಕೇಂದ್ರ ಪುತ್ತೂರು. ಶೈಕ್ಷಣಿಕ, ಕೃಷಿ ಮತ್ತು ವಾಣಿಜ್ಯ ಕೇಂದ್ರವಾಗಿರುವ ಪುತ್ತೂರಿನ ಸಮಗ್ರ ಅಭಿವೃದ್ಧಿಗಾಗಿ ಈ ಕೆಳಗಿನ ಯೋಜನೆಗಳನ್ನು ಈ ಸಂಪುಟ ಸಭೆಯಲ್ಲಿ ಪರಿಗಣಿಸಿ ಘೋಷಿಸಬೇಕೆಂದು ಈ ಮೂಲಕ ವಿನಂತಿಸುತ್ತೇವೆ.

ನಮ್ಮ ಬೇಡಿಕೆಗಳು:
- ಪುತ್ತೂರನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಯೋಜನೆ:
ದ.ಕ. ಜಿಲ್ಲೆಯ ಭೌಗೋಳಿಕವಾಗಿ ಮಧ್ಯಭಾಗದಲ್ಲಿರುವ ಮತ್ತು ಅತಿ ಹೆಚ್ಚು ಜನಸಂಖ್ಯೆ ಬೆಳವಣಿಗೆ ಹೊಂದಿರುವ ಪುತ್ತೂರನ್ನು ಹೊಸ ಜಿಲ್ಲಾ ಕೇಂದ್ರವನ್ನಾಗಿ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದರಿಂದ ಸುಳ್ಯ, ಕಡಬ, ಬೆಳ್ತಂಗಡಿ, ವಿಟ್ಲ ಮತ್ತು ಬಂಟ್ವಾಳ ಭಾಗದ ಜನರಿಗೆ ಆಡಳಿತ ಸುಲಭವಾಗಲಿದೆ. - ಪುತ್ತೂರಿನಲ್ಲಿ ಸಮಗ್ರ UGD ಯೋಜನೆ:
ಪುತ್ತೂರು ನಗರದಲ್ಲಿ ಮಳೆಗಾಲದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರುವುದು ಮತ್ತು ಚರಂಡಿ ಸಮಸ್ಯೆ ಹೆಚ್ಚಾಗಿದೆ. ಆದ್ದರಿಂದ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಮಗ್ರವಾದ ಭೂಗತ ಒಳಚರಂಡಿ (UGD) ಯೋಜನೆಯನ್ನು ತುರ್ತಾಗಿ ಜಾರಿಗೊಳಿಸಬೇಕು. - ಸರ್ಕಾರಿ ವಿಶ್ವವಿದ್ಯಾಲಯದ ಉಪಕೇಂದ್ರ ಮತ್ತು ಕೌಶಲ್ಯ ಕೇಂದ್ರ:
ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಅಥವಾ ಕೌಶಲ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ಪುತ್ತೂರಿಗೆ ತರಬೇಕು. ಹಾಗೂ ITI, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸರ್ಕಾರಿ Skill Development Center ಮತ್ತು ವರ್ಷಕ್ಕೆ ಎರಡು ಬಾರಿ ಉದ್ಯೋಗ ಮೇಳದ ವ್ಯವಸ್ಥೆ ಮಾಡಬೇಕು. - ಕ್ರೀಡಾ ಮತ್ತು ಸಂಶೋಧನಾ ಕೇಂದ್ರ:
ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಸುಸಜ್ಜಿತ ಕ್ರೀಡಾಂಗಣ ಮತ್ತು ವಿಜ್ಞಾನ ಸಂಶೋಧನಾ ಕೇಂದ್ರದ ಅಭಿವೃದ್ಧಿ. - ಅಡಿಕೆ ಸಂಶೋಧನಾ ಕೇಂದ್ರ:
CPCRI ಮಾದರಿಯಲ್ಲಿ ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪುತ್ತೂರು / ಸುಳ್ಯದಲ್ಲಿ ಸಂಶೋಧನಾ ಉಪಕೇಂದ್ರವನ್ನು ಸ್ಥಾಪಿಸಬೇಕು. - ಕಸ್ತೂರಿ ರಂಗನ್ ವರದಿ:
ಈ ವಿಷಯವಾಗಿ ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗದ ರೀತಿಯಲ್ಲಿ, ರೈತಪರ ನಿಲುವು ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು.ಎಂದು
ಜಿಲ್ಲಾ ಬಿಜೆಪಿ ಪ್ರಕೋಷ್ಠ,ಸಹ ಸಂಚಾಲಕರು ಮತ್ತು ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ ಅಭಿಪ್ರಾಯ ತಿಳಿಸಿದ್ದಾರೆ.






