ಅರಂತೋಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ.ಆರ್. ಜಯಪ್ರಕಾಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

0


ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಕಳೆದ 9 ವರ್ಷಗಳಿಂದ ಜನಸ್ನೇಹಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಗ್ರಾಮ ಪಂಚಾಯತ್ ಗೆ ದೊರಕಿದ ರಾಜ್ಯಮಟ್ಟದಲ್ಲಿ ಮಾದರಿ ಪಂಚಾಯತ್ ಆಗಿ ರೂಪಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನವಾಗಿ ಆಗಮಿಸಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯನ್ನು ಸ್ವಾಗತಿಸುವ ಕಾರ್ಯಕ್ರಮ ಸೆ. 17 ರಂದು ಅರಂತೋಡು ಗ್ರಾಮ ಪಂಚಾಯತ್ ಅಮೃತ ಸಭಾಭವನ ದಲ್ಲಿ ನಡೆಯಿತು. ಕಾರ್ಯಕ್ರಮ ವನ್ನು ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಭಿನಂದನಾ ಭಾಷಣ ವನ್ನು ನಿವೃತ್ತ ಪ್ರಾಂಶುಪಾಲ ಕೆ. ಆರ್ ಗಂಗಾಧರ ಮಾಡಿದರು. ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ಕುಕ್ಕುಂಬಳ ಪ್ರಾಸ್ತಾವಿಕ ಭಾಷಣ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಈ ಸಂಧರ್ಭದಲ್ಲಿ , ಪಿಡಿಒ. ಜಯಪ್ರಕಾಶ್ , ಸುಳ್ಯ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ರಾಜಣ್ಣ , ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಸಂತೋಷ್, ನೂತನ ಪಿಡಿಒ ರಮೇಶ್ , ಕೆಡಿಪಿ ಸದಸ್ಯ ಅಶ್ರಫ್ ಗುಂಡಿ,ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪುಷ್ಪ ಮೆದಪ್ಪ , ಇಂಜಿನಿಯರ್ ಮಣಿಕಂಠ , ಸೇರಿದಂತೆ ಪಂಚಾಯತ್ ಸದಸ್ಯರು ಸಿಬ್ಬಂದಿ ವರ್ಗ ಆಶಾ ಕಾರ್ಯಕರ್ತರು ನಾಗರಿಕರು ಈ ಸಂದರ್ಭದಲ್ಲಿ ಉಪಸ್ಥಿತಿದ್ದರು. ಪಿಡಿಒ ಜಯಪ್ರಕಾಶ್ ಸ್ವಾಗತಿಸಿ ರಂಜಿತ್ ಅಡ್ತಲೆ ಕಾರ್ಯಕ್ರಮ ನಿರೂಪಿಸಿದರು.