ಬಳ್ಪ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನದ ಸಾಧಕ ಬಾಧಕ ಕುರಿತು ಗ್ರಾಮಸ್ಥರ ಸಭೆ

0

ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳ್ಪ ಮತ್ತು ಕೇನ್ಯ ಗ್ರಾಮವನ್ನು ಕಸ್ತೂರಿ ರಂಗನ್ ವರದಿಯನ್ವಯ ಪರಿಸರ ಸೂಕ್ಷ್ಮ ಪ್ರದೇಶ (FSA) ವ್ಯಾಪ್ತಿಗೆ ಒಳಪಡಿಸಲಾಗುತ್ತಿರುವ ಕುರಿತು ಗ್ರಾಮಸ್ಥರ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಚರ್ಚಿಸಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತಾಪಿ
ಜನರು ಮನವಿ ಸಲ್ಲಿಸಿದ ಮೇರೆಗೆ ಗ್ರಾಮಸ್ಥರ ವಿಶೇಷ ಗ್ರಾಮಸಭೆ ಸೆ. 17ರಂದು ಬಳ್ಪ ಉ.ಮಾ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಆಡಳಿತಾಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.